Mysore
18
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ

man found dead

ಹಾಸನ: ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ.

ಸಂಪತ್‌ ಕುಮಾರ್‌ ಎಂಬುವವನೇ ಮೃತ ವ್ಯಕ್ತಿಯಾಗಿದ್ದಾನೆ. ಕಳೆದ 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಸಂಪತ್‌ ಕುಮಾರ್‌ ಮೊಟ್ಟೆ ಎಸೆದಿದ್ದ. ಇದೀಗ ಸಂಪತ್‌ ಕುಮಾರ್‌ ಶವ ಹಾಸನದಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ:- ಮೈಸೂರು| ರಾತ್ರೋರಾತ್ರಿ ಶ್ರೀಗಂಧದ ಮರ ಕಳ್ಳತನ 

ಮೇಲ್ನೋಟಕ್ಕೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಬಳಿಕ ಶವವನ್ನು ಕಾರಿನಲ್ಲಿ ತಂದು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!