ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಫಾಸ್ಟ್ಯಾಗ್ ಸೌಲಭ್ಯವನ್ನು ಪರಿಚಯಿಸಿದ್ದರೂ ಅದು ಕಾರ್ಯನಿರ್ವಹಿಸುತ್ತಿಲ್ಲ.
ಇದರಿಂದಾಗಿ ಇನ್ನೂ ನಗದು ಸಂಗ್ರಹಣೆಯೇ ನಡೆಯುತ್ತಿದೆ. ಇದು ಡಿಜಿಟಲ್ ಭಾರತದ ಆಶಯಕ್ಕೆ ವಿರುದ್ಧವಾಗಿದೆ. ಜೊತೆಗೆ, ಚಾಮುಂಡಿ ಬೆಟ್ಟದಲ್ಲಿ ವಿದ್ಯುತ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅನುಕೂಲ ಕಲ್ಪಿಸಬೇಕು. ಇದರಿಂದ ಸಮಾಜಕ್ಕೆ ಪರಿಸರ ಸ್ನೇಹಿ ಸೌಲಭ್ಯ ಒದಗು ವುದರ ಜೊತೆಗೆ ಆದಾಯವನ್ನೂ ಗಳಿಸಬಹುದು. ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಫಾಸ್ಟ್ಯಾಗ್ ಸೌಲಭ್ಯವನ್ನು ಸಕ್ರಿಯಗೊಳಿಸಲು ಮತ್ತು ವಿದ್ಯುತ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ದೇವರಾಜ್, ಹಿನಕಲ್, ಮೈಸೂರು.





