ಮೈಸೂರು: ಡೆಂಗ್ಯೂ ಜ್ವರ ಬರದಂತೆ ಉತ್ತಮ ಜೀವನವನ್ನು ನಡೆಸಲು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟಿಕೊಳ್ಳಬೇಕು. ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಈ ನಿಟ್ಟಿನಲ್ಲಿ ಜನ ಪ್ರತಿನಿಧಿಗಳ ಸಹಕಾರ ಅಗತ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸುವರ್ಣ ಹೇಳಿದರು.
ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಆಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಡೆಂಗ್ಯೂ ಜ್ವರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಜೊತೆ ಜನಪ್ರತಿನಿಧಿಗಳು ಸಹಕಾರ ಬಹಳ ಮುಖ್ಯವಾಗಿರುತ್ತದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಿದರು.
ಪ್ರತಿ ಶುಕ್ರವಾರ ಲಾರ್ವಾ ಸರ್ವೆಯನ್ನೂ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಕೈಕೊಂಡಿದ್ದು ಲಾರ್ವಾನಾಶ ಮಾಡಿ ಸೊಳ್ಳೆಗಳ ಬೆಳವಣಿಗೆಯ ಮಟ್ಟವನ್ನು ಕಡಿಮೆ ಮಾಡುವುದರಿಂದ ಡೆಂಗ್ಯೂ ಜ್ವರಗಳ ಪ್ರಮಾಣವನ್ನು ಕಡಿಮೆ ಮಾಡಬಹುದು. ಜ್ವರ ಬಂದ ತಕ್ಷಣ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರ ಪಾಲಿಕೆಯ ಮಾಜಿ ಸದಸ್ಯರಾದ ರಜಿನಿ ಅಣ್ಣಯ್ಯ ಮತ್ತು ಛಾಯಾದೇವಿ, ಎಂಟಾಮಾಲಾಜಿಸ್ಟ್ ಉಷಾ , ಜಿಲ್ಲಾ ಆರ್.ಸಿ. ಎಚ್ ಸಿರಾಜ್ ಮಹಮದ್, ತಾಲ್ಲೂಕು ಆರೋಗ್ಯ ಅಧಿಕಾರಿ ಪುಟ್ಟತಾಯ್ಯಮ್ಮ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ನವೀನ್, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಮುನೀಂದ್ರಮ್ಮ ಮತ್ತು ಪದ್ಮಾವತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಮೇಲ್ವಿಚಾಕರು ಹಾಜರಿದ್ದರು.





