Mysore
33
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಗೋಣಿಕೊಪ್ಪ ಬೈಪಾಸ್ ರಸ್ತೆ ಮುಂದುವರಿದ ಕಾಮಗಾರಿ ಮುಕ್ತಾಯ: ಸುಗಮ ವಾಹನ ಸಂಚಾರಕ್ಕೆ ಚಾಲನೆ

ಗೋಣಿಕೊಪ್ಪ: ಗೋಣಿಕೊಪ್ಪ ಬೈಪಾಸ್‌ ರಸ್ತೆ ಮುಂದುವರಿದ ಕಾಮಗಾರಿ ಮುಕ್ತಾಯಗೊಂಡಿದ್ದು, ಶಾಸಕ ಎ.ಎಸ್.ಪೊನ್ನಣ್ನ ಅವರಿಂದು ಸುಗಮ ಸಂಚಾರಕ್ಕೆ ಚಾಲನೆ ನೀಡಿದರು.

ಕಳೆದ ಹತ್ತು ದಿನಗಳ ಹಿಂದೆ ಗೋಣಿಕೊಪ್ಪಲು ಬೈಪಾಸ್ ರಸ್ತೆಯ ಕಾರ್ಪೊರೇಷನ್ ಬ್ಯಾಂಕ್ ಮುಂಭಾಗದಿಂದ, ರಾಜ್ಯ ಹೆದ್ದಾರಿಗೆ ಸಂಪರ್ಕಿಸುವ ಕಲ್ಪಿಸುವಲ್ಲಿ ಮುಂದುವರಿದ ಕಾಮಗಾರಿ ಆರಂಭಗೊಂಡಿತು.

ಇದರಿಂದ ಗೋಣಿಕೊಪ್ಪಲಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿ ವಾಹನ ಸವಾರಾರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಕಾಮಗಾರಿ ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲಾಗಿದ್ದು, ಶಾಸಕ ಎ.ಎಸ್.ಪೊನ್ನಣ್ಣ ಅವರಿಂದು ಸುಗಮ ಸಂಚಾರಕ್ಕೆ ಚಾಲನೆ ನೀಡಿದರು. ಈ ವೇಳೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!