Mysore
25
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ರಾಜ್ಯ ಸರ್ಕಾರಕ್ಕೆ 2 ವರ್ಷ : ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನೆಲೆಗೆ..!

ಮೈಸೂರು : ಮೇ.20 ಕ್ಕೆ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಎರಡು ವರ್ಷಗಳು ತುಂಬಲಿದ್ದು, ಇದರ ಬೆನ್ನಲ್ಲೇ ಸಾಧನಾ ಸಮಾವೇಶಕ್ಕೆ ಕೈಪಡೆ ಸಿದ್ಧತೆ ನಡೆಸುತ್ತಿರುವಂತಯೇ ಸಚಿವ ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

ರಾಜ್ಯ ಸರ್ಕಾರ ʼಸಮರ್ಪಣೆ ಸಂಕಲ್ಪ ಸಮಾವೇಶʼವನ್ನು ಹೊಸಪೇಟೆಯಲ್ಲಿ ನಾಳೆ ಆಯೋಜಿಸಿದೆ. ಜಿಲ್ಲಾಡಳಿತ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಸುತ್ತಿದೆ.

ಸಂಪುಟ ಬದಲಾವಣೆಗೇ ಮೊದಲಿನಿಂದಲೂ ಕೂಗು ಕೇಳಿಬರುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್‌ ಕೂಡ ಈ ಹಿಂದೆ ತಮ್ಮ ಭಾಷಣದಲ್ಲಿ ಸಂಪುಟ ಪುನಾರಚನೆ ಸುಳಿವು ನೀಡಿದ್ದರು. ಆದರೆ ಯಾವುದೇ ಬೆಳವಣಿಗೆಗಳು ನಡೆದಿರಲಿಲ್ಲ. ಇದೀಗ ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬುತ್ತಿದ್ದಂತೆ ಸಂಪುಟ ಪುನಾರಚನೆ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ.

ಸಚಿವ ಸಂಪುಟಕ್ಕೆ ಸೇರ್ಪಡೆ ಆಗಬೇಕು ಎಂಬ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಿಎಂ ಹಾಗೂ ಡಿಸಿಎಂ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ಈಗಾಗಲೇ ಹೈಕಮಾಂಡ್‌ ಜೊತೆ ಲಾಬಿ ನಡೆಸುತ್ತಿದ್ದಾರೆ.

ಸಂಪುಟದಲ್ಲಿ ಕಾರ್ಯಕ್ಷಮತೆ ತೋರದ 12 ಸಚಿವರನ್ನು ಹೈಕಮಾಂಡ್‌ ಅನುಮೋದನೆ ಪಡೆದ ಬಳಿಕ ಕೈಬಿಡುವ ಸಾಧ್ಯತೆಗಳಿವೆ. ಜೊತೆಗೆ ಇನ್ನೀತರರಿಗೂ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

Tags:
error: Content is protected !!