ಪೊನ್ನಂಪೇಟೆ: ಮನೆ ಬಾಗಿಲ ಬಳಿಯೇ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಪೊನ್ನಂಪೇಟೆಯ ಕೋತೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಜ್ಜಮಾಡ ಪವನ್ ಪೊನ್ನಪ್ಪ ಎಂಬುವವರ ಮನೆಯ ಅಂಗಳದಲ್ಲಿ ಭಾನುವಾರ ರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆಯ ಓಡಾಟದ ದೃಶ್ಯ ಮನೆಯ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಜನತೆಯನ್ನು ಭಯಭೀತರನ್ನಾಗಿಸಿದೆ.
ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿಯುವಂತೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ, ಚಿರತೆಯನ್ನು ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.





