Mysore
20
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಪಹಲ್ಗಾಮ್ ಘಟನೆ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಮಹಿಳಾ, ಪುರುಷರ ತಂಡ‌

ind-vs-pak

ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧ ಸಮರ ಸಾರಿರುವ ಭಾರತ ಆಪರೇಷನ್ ಸಿಂಧೂರ್ ಮೂಲಕ ಕ್ಷಿಪಣಿ ದಾಳಿ ನಡೆಸಿ ಪಾಕ್‌ಗೆ ತಕ್ಕ ಪಾಠ ಕಲಿಸಿದೆ. ಇದರ ನಡುವೆಯೇ ಇದೀಗ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಭಾರತೀಯ ಕ್ರಿಕೆಟ್‌ ಮಂಡಳಿ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ನಡೆಸುವ ಎಲ್ಲಾ ಟೂರ್ನಿಗಳಿಂದ ಸದ್ಯಕ್ಕೆ ದೂರವಿರಲು ನಿರ್ಧರಿಸಿದೆ. ಹೀಗಾಗಿ ಈ ವರ್ಷ ನಡೆಯಲಿರುವ ಏಷ್ಯಾಕಪ್‌ ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ.

ಶ್ರೀಲಂಕಾದಲ್ಲಿ ಮುಂದಿನ ತಿಂಗಳಿಂದ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್‌ ಟೂರ್ನಿ ನಡೆಯಲಿದೆ. ಈ ಟೂರ್ನಿಗೆ ತಂಡವನ್ನು ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ.

ಹಾಗೆಯೇ ಈ ವರ್ಷಾಂತ್ಯದಲ್ಲಿ ಪುರುಷರ ಏಷ್ಯಾಕಪ್‌ ಟೂರ್ನಿ ಆಯೋಜಿಸಲು ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ನಿರ್ಧರಿಸಿತ್ತು. ಇದೀಗ ಈ ಟೂರ್ನಿಯಿಂದಲೂ ಭಾರತ ಹೊರಗುಳಿಯುವುದಾಗಿ ಬಿಸಿಸಿಐ ತಿಳಿಸಿದೆ.

Tags:
error: Content is protected !!