Mysore
24
overcast clouds

Social Media

ಶುಕ್ರವಾರ, 15 ಮೇ 2026
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಅಂಡ್‌ ಗ್ಯಾಂಗ್‌ನ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಹಾಗೂ ಗ್ಯಾಂಗ್‌ನ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಕೋರ್ಟ್‌ ವಿಚಾರಣೆ ಮುಂದೂಡಿಕೆ ಮಾಡಿದೆ.

ಜುಲೈ.10ಕ್ಕೆ ವಿಚಾರಣೆಯನ್ನು ಮುಂದೂಡಿದ ನ್ಯಾಯಾಲಯ ಅಂದಿನ ದಿನ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ.

Tags:
error: Content is protected !!