Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ನಾವು ಬಡವರ ಪರ, ಬಿಜೆಪಿ ಶ್ರೀಮಂತರ ಪರ: ರಾಹುಲ್‌ ಗಾಂಧಿ ಕಿಡಿ

rahul gandhi

ಹೊಸಪೇಟೆ: ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆಯನ್ನು ಈಡೇರಿಸಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಇಂದು ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶವನ್ನು ಆಯೋಜಿಸಲಾಗಿತ್ತು.

ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ತರಲು ಆಗಲ್ಲ ಎಂದು ಪ್ರಧಾನಿ ಮೋದಿ ಟೀಕಿಸಿದ್ದರು. ಆದರೆ ನಾವು ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತಂದು ಭರವಸೆಯನ್ನು ಈಡೇರಿಸಿದ್ದೇವೆ ಎಂದರು.

1 ಕೋಟಿಗೂ ಹೆಚ್ಚು ಮಹಿಳೆಯರಿಗೆ 2 ಸಾವಿರ ಕೊಡುತ್ತಿದ್ದೇವೆ. ಎಲ್ಲಾ ಮನೆಗಳಿಗೂ ಉಚಿತ ವಿದ್ಯುತ್‌ ಕೊಡುತ್ತಿದ್ದೇವೆ. ಬಡ ಕುಟುಂಬಗಳ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ. ಮಹಿಳೆಯರು ಫ್ರೀಯಾಗಿ ಬಸ್‌ನಲ್ಲಿ ಓಡಾಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಅವರು, ಬಿಜೆಪಿ ಶ್ರೀಮಂತರ ಪರ ಕೆಲಸ ಮಾಡುತ್ತಿದೆ. ಬಿಜೆಪಿಯವರು ಎರಡರಿಂದ ಮೂರು ಮಂದಿ ಕೋಟ್ಯಾಧಿಪತಿಗಳ ಪರ ನಿಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!