Mysore
24
overcast clouds

Social Media

ಗುರುವಾರ, 01 ಜನವರಿ 2026
Light
Dark

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

dk shivakumar

ಹೊಸಪೇಟೆ: ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಇಂದು ನಡೆದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆಯ ಸಂಕಲ್ಪ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ನಾವಿಂದು ಎರಡು ವರ್ಷಗಳ ಸಂಭ್ರಮಾಚರಣೆ ಮಾಡಲು ಇಲ್ಲಿಗೆ ಬಂದಿಲ್ಲ. ಕರ್ನಾಟಕ ರಾಜ್ಯದ ಜನರ ಋಣ ತೀರಿಸಲು ಸಮರ್ಪಣೆಯ ಸಂಕಲ್ಪ ಕಾರ್ಯಕ್ರಮ ಮಾಡುತ್ತಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ 136 ಕ್ಷೇತ್ರಗಳಲ್ಲಿ ಶಾಸಕರನ್ನು ಆಯ್ಕೆ ಮಾಡಿ ನಮಗೆ ಆಶೀರ್ವಾದ ಮಾಡಿದ್ದೀರಿ. ನಿಮ್ಮ ಋಣ ತೀರಿಸಲು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಯೋಜನೆ ನೀಡುವ ಮೂಲಕ ನಮ್ಮ ಸರ್ಕಾರ ಇತಿಹಾಸ ಬರೆಯುತ್ತಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರದ ಎರಡು ವರ್ಷಗಳ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಬೇಡಿ ಹಾಕಿದೆ. ಇಂದಿರಾ ಗಾಂಧಿ ಅವರು ಈ ಜಿಲ್ಲೆಯಲ್ಲಿ ವಿಜಯನಗರ ಸ್ಟೀಲ್ ಆರಂಭಿಸಿದರು. ಸೋನಿಯಾ ಗಾಂಧಿ ಅವರು ಇಲ್ಲಿ ಬಂದು ವಿದ್ಯುತ್ ಶಕ್ತಿಯ ಆರ್‌ಟಿಪಿಎಸ್ ಆರಂಭಿಸಿದರು. ರಾಹುಲ್ ಗಾಂಧಿ ಅವರು ನಮ್ಮ ರಾಜ್ಯದಲ್ಲಿ ಭಾರತ ಜೋಡೋ ಯಾತ್ರೆ ಮಾಡಿದ ಬಹುತೇಕ ಎಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಸಂಸದರನ್ನು ಆಯ್ಕೆ ಮಾಡಿದ್ದೀರಿ. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ವರ್ಷಕ್ಕೆ 5 ಸಾವಿರ ಕೋಟಿ ನೀಡುತ್ತಿದೆ ಎಂದರು.

ವಿರೋಧ ಪಕ್ಷಗಳು ನಮ್ಮ ವಿರುದ್ಧ ಟೀಕೆಗಳನ್ನು ಮಾಡುತ್ತಿವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಅದಕ್ಕೆ ನಮ್ಮ ಯೋಜನೆಗಳೇ ಸಾಕ್ಷಿ. ರೈತರ ಬವಣೆ ನೀಗಿಸಲು ರಾಜ್ಯದ ಕೆರೆಗಳನ್ನು ತುಂಬಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು

Tags:
error: Content is protected !!