ಮೈಸೂರು ವಿಶ್ವವಿದ್ಯಾನಿಲಯದ ಜೈನಶಾಸ್ತ್ರ ಮತ್ತು ಪ್ರಾಕೃತ ಅಧ್ಯಯನ ವಿಭಾಗದ ಎದುರು ಚರಂಡಿ ನೀರು ಉಕ್ಕಿ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ವಿಶ್ವವಿದ್ಯಾನಿಲಯದಲ್ಲಿ ಸ್ವಚ್ಛತೆ ನಿರ್ವಹಣೆ, ನಲ್ಲಿ ಮತ್ತು ಒಳಚರಂಡಿ ನಿರ್ವಹಣೆಗೆಂದೇ ಪ್ರತ್ಯೇಕ ವಿಭಾಗವಿದ್ದು, ಸಿಬ್ಬಂದಿಯೂ ಇರುತ್ತಾರೆ. ಆದರೆ ಹಲವಾರು ದಿನಗಳಿಂದ ರಸ್ತೆಯ ಮೇಲೆ ಚರಂಡಿ ನೀರು ಹರಿಯುತ್ತಿದ್ದರೂ ವಿಶ್ವವಿದ್ಯಾನಿಲಯದ ಜೈನ ಶಾಸ್ತ್ರ ಮತ್ತು ಪ್ರಾಕೃತ ಅಧ್ಯಯನ ಕೇಂದ್ರದ ಮುಖ್ಯಸ್ಥರು ಹಾಗೂ ಸಿಬ್ಬಂದಿಯ ಗಮನಕ್ಕೆ ಬಾರದಿರುವುದು ವಿಪರ್ಯಾಸ.
ಸ್ವಚ್ಛತಾ ಸಿಬ್ಬಂದಿಯೂ ಕಂಡೂ ಕಾಣದಂತಿದ್ದಾರೆ. ಸಂಬಂಧಪಟ್ಟವರು ಕೂಡಲೇ ಹಾಳಾಗಿರುವ ಚರಂಡಿ ಪೈಪ್‌ಲೈನ್ ದುರಸ್ತಿ ಮಾಡುವ ಮೂಲಕ ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ.
– ನವೀನ್, ಮೈಸೂರು





