Mysore
19
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

ಓದುಗರ ಪತ್ರ | ನಾಯಿಗಳ ಹಾವಳಿ ನಿಯಂತ್ರಿಸಿ

ಓದುಗರ ಪತ್ರ

ಮೈಸೂರು ವಿವಿ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಓಡಾಡುವವರ ಹಿಂದೆಯೇ ನಾಯಿಗಳು ಬರುವುದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಯದಲ್ಲೇ ಓಡಾಡುವಂತಾಗಿದೆ.

ಮೈಸೂರು ವಿವಿ ಆವರಣದಲ್ಲಿ ವಾಯುವಿಹಾರಕ್ಕೆ ಬರುವವರು ಹಾಗೂ ಕೆಲವು ವಿದ್ಯಾರ್ಥಿಗಳು ನಾಯಿಗಳಿಗೆ ಬಿಸ್ಕೆಟ್ ಮೊದಲಾದ ತಿನಿಸುಗಳನ್ನು ಹಾಕಿ ಪೋಷಿಸುತ್ತಿದ್ದಾರೆ. ಮೈಸೂರು ಮಹಾ ನಗರ ಪಾಲಿಕೆಯವರು ಬೀದಿ ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆ ಮಾಡಿಸದೇ ಇರುವುದರಿಂದ ನಾಯಿಗಳ ಸಂತತಿ ವೇಗವಾಗಿ ಬೆಳೆಯುತ್ತಿದೆ. ಕೆಲವು ಬಾರಿ ನಾಯಿಗಳು ಜನರನ್ನು ಕಚ್ಚಿ ಗಾಯಗೊಳಿಸಿರುವ ಘಟನೆಗಳೂ ನಡೆದಿವೆ.

ಮೈಸೂರು ವಿವಿ ಆಡಳಿತಾಧಿಕಾರಿಗಳು ಕೂಡಲೇ ವಿವಿ ಆವರಣದಲ್ಲಿರುವ ಬೀದಿ ನಾಯಿಗಳನ್ನು ಹೊರ ಸಾಗಿಸಲು ಕ್ರಮ ಕೈಗೊಳ್ಳಬೇಕು ಹಾಗೂ ವಿವಿ ಆವರಣದಲ್ಲಿ ನಾಯಿಗಳಿಗೆ ಆಹಾರ ಕೊಡುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು.

-ನಾರಾಯಣ ಸ್ವಾಮಿ, ಮೈಸೂರು

Tags:
error: Content is protected !!