Mysore
29
light rain

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಮೈಸೂರು | ಯುವತಿಯ ಮೃತದೇಹ ಪತ್ತೆ ; ಕೊಲೆ ಶಂಕೆ

womans dead body found

ಮೈಸೂರು : ಆಲನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 25 ವರ್ಷದ ಯುವತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.

ಗಿರಿಬೋವಿ ಪಾಳ್ಯದ ಲತಾ(25) ಮೃತ ಯುವತಿ.

ನಗರದ ಹೊರವಲಯದ ವಿದ್ಯಾವಿಕಾಸ ಕಾಲೇಜಿನ ಬಳಿ ಇಂದು(ಮೇ.21) ಬೆಳಿಗ್ಗೆ ಯುವತಿಯ ಮೃತ ದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ಮುತ್ತುರಾಜ್‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕತ್ತು ಹಿಸುಕಿದ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದ್ದು, ಬೇರೆಡೆ ಕೊಂದು ನಿರ್ಜನ ಪ್ರದೇಶದಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಬಗ್ಗೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!