ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮೇ.23ರಂದು ಮೈಸೂರಿಗೆ ಭೇಟಿ ನೀಡಲಿದ್ದು, ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮೇ.23 ಹಾಗೂ 24ರಂದು ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ವೇಳೆ ಸಾಹಿತಿ ದೇವನೂರು ಮಹದೇವ ಅವರ ಪುಸ್ತಕ ಆಧಾರಿತ ಎದೆಗೆ ಬಿದ್ದ ಅಕ್ಷರ ಎಂಬ ನಾಟಕವನ್ನು ಕಲಾಮಂದಿರದಲ್ಲಿ ವೀಕ್ಷಣೆ ಮಾಡಲಿದ್ದಾರೆ.
ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ ಅವರು, ಮೇ.24ರ ಶನಿವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.




