Mysore
25
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಹೊಸ ಬಾಂಬ್‌

madenoor manu

ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನು ಇದೀಗ ವಿಡಿಯೋವೊಂದನ್ನು ಹರಿಬಿಟ್ಟು, ಹೊಸ ಬಾಂಬ್‌ ಸಿಡಿಸಿದ್ದಾರೆ.

ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ವಿಡಿಯೋ ಹರಿಬಿಟ್ಟಿರುವ ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆ ರಿಲೀಸ್‌ ಆಗುತ್ತಿದೆ. ಹೀಗಿರುವಾಗ ಎಫ್‌ಐಆರ್‌ ಮಾಡುವಂತಹ ಅವಶ್ಯಕತೆ ಇರಲಿಲ್ಲ. ಇತ್ತೀಚೆಗೆ ನಾನು ಆಕೆಯೊಂದಿಗೆ ಮಾತನಾಡಿದ್ದೆ. ಆಗ ನಾನು ಸುಮ್ಮನಿದ್ರೂ ಬೇರೆಯವರು ಬಿಡ್ತಿಲ್ಲ. ಈ ರೀತಿ ಮಾಡು ಎಂದು ಹೇಳಿಕೊಡ್ತಿದ್ದಾರೆ ಎಂದು ಅವಳೇ ಹೇಳಿದ್ದಳು. ಯಾರ್ಯಾರು ಹೇಳಿಕೊಡ್ತಿದ್ದಾರೆ ಎಂದು ಕೂಡ ನನ್ನ ಬಳಿ ಬಾಯಿಬಿಟ್ಟಿದ್ದಾಳೆ ಎಂದಿದ್ದಾರೆ. ಶೀಘ್ರದಲ್ಲೇ ನಾನು ಕಾನೂನಿನ ಮೂಲಕ ಉತ್ತರ ಕೊಡುವ ಕೆಲಸ ಮಾಡುತ್ತೇನೆ ಎಂದು ವಿಡಿಯೋದಲ್ಲಿ ಮಡೆನೂರು ಮನು ಹೇಳಿದ್ದಾರೆ.

Tags:
error: Content is protected !!