ಬೆಂಗಳೂರು: 2025ನೇ ಸಾಲಿನ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬಿಡಿಎನಲ್ಲಿ ಜಿ ಕೆಟಗರಿ ನಿವೇಶನ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರು, 2025ನೇ ಸಾಲಿನ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸುವ ದೃಷ್ಟಿಯಿಂದ ಬಿಡಿಎನಲ್ಲಿ ಜಿ ಕೆಟಗರಿ ನಿವೇಶನ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮಾಹಿತಿ ನೀಡಿದರು.





