Mysore
21
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಬಿಜೆಪಿಯಿಂದ ಶಾಸಕ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಉಚ್ಛಾಟನೆ

ST Somashekhar Shivaram Hebbar

ಬೆಂಗಳೂರು: ಬೆಂಗಳೂರಿನ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್‌ ಹಾಗೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್‌ ಹೆಬ್ಬಾರ್‌ಗೆ ಬಿಜೆಪಿ ಹೈಕಮಾಂಡ್‌ ಬಿಗ್‌ ಶಾಕ್‌ ನೀಡಿದೆ.

ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಇಬ್ಬರನ್ನೂ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.

ಇವರಿಬ್ಬರು ನಾಯಕರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್‌ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ ಅವರನ್ನು ಉಚ್ಛಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ ಬೆನ್ನಲ್ಲೇ ಈ ಇಬ್ಬರು ಶಾಸಕರು ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದು, ಪಕ್ಷದ ಎಲ್ಲಾ ಸ್ಥಾನಗಳಿಂದ ಇಬ್ಬರು ಶಾಸಕರಿಗೆ ಕೊಕ್‌ ನೀಡಲಾಗಿದೆ.

Tags:
error: Content is protected !!