ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ದಿಢೀರ್ ಏರಿಕೆಯಾಗಿದೆ.
ಜಲಾಶಯದ ಇಂದಿನ ಒಳಹರಿವು 21,946 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 67.75 ಅಡಿಗಳಾಗಿದೆ.
ಕೇರಳದ ವಯನಾಡಿನಲ್ಲಿ ಮಳೆ ಹೀಗೆಯೇ ಮುಂದುವರಿದರೆ ಕಬಿನಿ ಜಲಾಶಯದ ಭರ್ತಿಯತ್ತ ಸಾಗಲಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಲಿದೆ. ಈ ಬಾರಿ ವಾಡಿಕೆಗಿಂತಲೂ ಮೊದಲೇ ಮುಂಗಾರು ಪ್ರವೇಶವಾಗಿರುವುದರಿಂದ ಆದಷ್ಟು ಬೇಗ ಜಲಾಶಯಗಳು ಭರ್ತಿಯಾಗಲಿವೆ ಎಂದು ಅಂದಾಜಿಸಲಾಗಿದೆ.





