Mysore
20
scattered clouds

Social Media

ಶುಕ್ರವಾರ, 27 ಫೆಬ್ರವರಿ 2026
Light
Dark

ಓದುಗರ ಪತ್ರ: ಪರೀಕ್ಷಾ ಮೌಲ್ಯಮಾಪಕರ ನಿರ್ಲಕ್ಷ್ಯ ತರವಲ್ಲ

ಓದುಗರ ಪತ್ರ

ವಿದ್ಯಾರ್ಥಿಗಳು ಶ್ರಮಪಟ್ಟು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಬರೆದರೂ ಮೌಲ್ಯಮಾಪಕರ ಎಡವಟ್ಟಿನಿಂದ ಅನೇಕ ವಿದ್ಯಾರ್ಥಿಗಳ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುತ್ತದೆ. ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಅಂಕಗಳು ಬಂದಾಗ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ. ಮರು ಮೌಲ್ಯ ಮಾಪನಕ್ಕೆ ಅರ್ಜಿ ಹಾಕಿದಾಗ ಬಹುತೇಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳು ಬರುತ್ತವೆ. ಹಾಗಾಗಿ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುವ ಮೌಲ್ಯಮಾಪಕರಿಗೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಒಮ್ಮೆ ಬೇಜವಾಬ್ದಾರಿ ಪ್ರದರ್ಶಿಸಿದ ಶಿಕ್ಷಕರನ್ನು ನಂತರದ ದಿನಗಳಲ್ಲಿ ಮೌಲ್ಯಮಾಪನ ಕಾರ್ಯಗಳಿಗೆ ನಿಯೋಜಿಸಬಾರದು.

-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು

Tags:
error: Content is protected !!