Mysore
28
overcast clouds

Social Media

ಮಂಗಳವಾರ, 01 ಸೆಪ್ಟೆಂಬರ್ 2026
Light
Dark

ಬೆಳಗಾವಿಯಲ್ಲಿ ಕೊರೊನಾ ಸೋಂಕಿತ 70 ವರ್ಷದ ವೃದ್ಧ ಸಾವು

covid 19

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳಗಾವಿಯಲ್ಲಿ ಕೊರೊನಾ ದೃಢಪಟ್ಟ 70 ವರ್ಷದ ರೋಗಿಯೊಬ್ಬರು ಮೃತಪಟ್ಟಿದ್ದಾರೆ.

ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ವೃದ್ಧ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಬೆಳಗಾವಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ನಿನ್ನೆಯಷ್ಟೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ:- ಜಮ್ಮು-ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್‌ ಆರೋಗ್ಯದಲ್ಲಿ ಏರುಪೇರು

ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್‌ ಬಂದಿತ್ತು. ತಕ್ಷಣ ಅವರನ್ನು ಕೋವಿಡ್‌ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ನಿಧನರಾಗಿದ್ದಾರೆ.

Tags:
error: Content is protected !!