Mysore
24
overcast clouds

Social Media

ಮಂಗಳವಾರ, 19 ಮೇ 2026
Light
Dark

ಬಿಷ್ಣೋಯಿ ಗ್ಯಾಂಗ್‌ನ ಶಾರ್ಪ್‌ ಶೂಟರ್‌ ನವೀನ್‌ ಕುಮಾರ್‌ ಎನ್‌ಕೌಂಟರ್‌ಗೆ ಬಲಿ

Lawrence Bishnoi

ಹಾಪುರ: ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ನ ಶಾರ್ಪ್‌ ಶೂಟರ್‌ ನವೀನ್‌ ಕುಮಾರ್‌ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ.

ಉತ್ತರ ಪ್ರದೇಶದ ಕೊತ್ವಾಲಿ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶಾರ್ಪ್‌ ಶೂಟರ್‌ ನವೀನ್‌ ಕುಮಾರ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಹಾಗೂ ದೆಹಲಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್‌ ನಡೆದಿದೆ. ಶಾರ್ಪ್‌ ಶೂಟರ್‌ ನವೀನ್‌ ವಿರುದ್ಧ ದೆಹಲಿ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

ಕೊತ್ವಾಲಿ ಪ್ರದೇಶದಲ್ಲಿ ನವೀನ್‌ ಹಾಗೂ ಆತನ ಗ್ಯಾಂಗ್‌ ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನವೀನ್‌ ಗ್ಯಾಂಗ್‌ ಪೊಲೀಸರ ಮೇಲೆ ದಾಳಿ ನಡೆಸಿದೆ. ಪೊಲೀಸರು ಪ್ರತಿ ದಾಳಿ ನಡೆಸಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ನವೀನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಾರ್ಗಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Tags:
error: Content is protected !!