ಪಿರಿಯಾಪಟ್ಟಣ: ಮಿನಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಗೊರಹಳ್ಳಿ ಕೆರೆ ಬಳಿ ನಡೆದಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಹಿಟ್ನೆಬಾಗಿಲು ಗ್ರಾಮದ ಯುವಕರಾದ ಶೇಖರ್ ಹಾಗೂ ಶಂಕರ್ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಅಪಘಾತದ ತೀವ್ರತೆಗೆ ಓರ್ವ ಯುವಕನ ರುಂಡ ಹಾರಿಹೋಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬೆಟ್ಟದಪುರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.





