Mysore
15
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನೀಡುವುದು ನಮ್ಮ ಗುರಿ : ಸಿಎಂ

siddaramaiah

ಬೆಂಗಳೂರು : ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗುತ್ತೇವೆ ಎಂದರು.

ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ‌ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ. ಅಂಬೇಡ್ಕರ್ ಅವರು ಕೊಟ್ಟಂತಹ ಸಂವಿಧಾನವನ್ನೂ ಎಲ್ಲರೂ ಪಾಲಿಸಬೇಕು ಎಂದರು.

ಜಾತಿ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣ ಆಗಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದರು.

1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಹಣಕಾಸು ಅನುಮೋದನೆ ನೀಡಿದ್ದೆ ಎಂದು ಸ್ಮರಿಸಿದರು.

ಮಕ್ಕಳಿಗೆ ಉತ್ತಮ‌ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ‌ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದರು.

Tags:
error: Content is protected !!