Mysore
24
moderate rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ನಿಲ್ಲದ ಫೈನಾನ್ಸ್‌ ಹಾವಳಿ ; ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ : ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬೇಸತ್ತು ವ್ಯಕ್ತಿಯೊಬ್ಬ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.

ದೇವಜನ ಜಗದೀಶ್ (56) ಎಂಬುವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಡಿಕೇರಿಯ ಮಹಿಳಾ ಸಮಾಜದ ಗೋಡೌನ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಗುಂಡು ಹೊಡೆದುಕೊಂಡಿದ್ದಾರೆ.

ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ನವರ ಹಾವಳಿಯಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟಿನಲ್ಲಿ ಬರೆಯಲಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಮೀಟರ್ ಬಡ್ಡಿ ಹಾವಳಿ ಮಿತಿಮೀರಿದ್ದು ಇದನ್ನು ತಡೆಗಟ್ಟುವಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Tags:
error: Content is protected !!