Mysore
17
clear sky

Social Media

ಗುರುವಾರ, 22 ಜನವರಿ 2026
Light
Dark

ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ: ಮೈಸೂರು ಪಾಲಿಕೆ ಆರೋಗ್ಯಾಧಿಕಾರಿ ವೆಂಕಟೇಶ್‌

Health Officer Venkatesh

ಮೈಸೂರು: ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈ ಬಾರಿ ಮೈಸೂರಿಗೆ ಉತ್ತಮ ಮಳೆಯಾಗಿದ್ದು, ಮಳೆಯ ನೀರಿನಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜೂನ್ ತಿಂಗಳಲ್ಲಿ ಮಾರಣಾಂತಿಕ ಕಾಯಿಲೆ ಬರುವ ಸಾಧ್ಯತೆಗಳು ಹೆಚ್ಚಾಗಿದೆ. ನಿಂತ ನೀರಿನಿಂದ ಸೊಳ್ಳೆಗಳ ಸಂತಾನ ಹೆಚ್ಚಾಗಲಿದ್ದು, ನಾಗರೀಕರು ಸೊಳ್ಳೆ ಬಾರದ ಹಾಗೆ ಎಚ್ಚರವಹಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನು ಜನತೆ ಕೋವಿಡ್ ಬಗ್ಗೆ ಭಯ ಪಡುವುದು ಬೇಡ. ನಾಗರೀಕರು ಎಲ್ಲೆಂದರಲ್ಲಿ ಕಸವನ್ನು ಬೀದಿಗೆ ಹಾಕಬಾರದು. ರಾತ್ರಿ ವೇಳೆ ಬೀದಿಬದಿ ವ್ಯಾಪಾರಸ್ಥರು ಹೆಚ್ಚಾಗಿ ಕಸ ಹಾಕುತ್ತಿದ್ದಾರೆ. ಬಿಸಾಕಿದ ಕಸವು ಮಳೆ ನೀರಿಗೆ ಸಿಲುಕಿ ಚರಂಡಿಗೆ ಸೇರಿಕೊಳ್ಳುತ್ತದೆ. ಇದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಮ್ಮೊಂದಿಗೆ ನಗರದ ಜನರು ಸಹಕರಿಸಬೇಕು. ಆರೋಗ್ಯದ ದೃಷ್ಟಿಯಿಂದ ಬೀದಿಬದಿ ಆಹಾರಗಳನ್ನು ಸೇವಿಸಬೇಡಿ ಎಂದು ಮನವಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಸದ ಸಮಸ್ಯೆ ಇದ್ದರೆ ಪಾಲಿಕೆಗೆ ಒಂದೇ ಒಂದು ಕರೆ ಮಾಡಿ. ಕಸದ ಸಮಸ್ಯೆ ಎದುರಿಸಲು ನಮ್ಮ ತಂಡ ಸಜ್ಜಾಗಿದೆ. ಕಸ ಕಂಡಲ್ಲಿ ಒಂದೇ ಒಂದು ಫೋಟೋ ಅಥವಾ ಕರೆ ಮಾಡಿ ಮಾಹಿತಿ ನೀಡಿ. ಕೇವಲ ಒಂದೇ ಗಂಟೆಯಲ್ಲೇ ಸಮಸ್ಯೆ ಸರಿಪಡಿಸುತ್ತೇವೆ. ಎಲ್ಲೆಂದರಲ್ಲಿ ಕಸ ಬಿಸಾಕುವವರಿಗೆ ದಂಡ ಹಾಕುತ್ತಿದ್ದೇವೆ. ಕೆಲವು ಗಂಭೀರ ಪ್ರಕರಣವಿದ್ದರೆ ಎಫ್‌ಐಆರ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!