Mysore
25
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಮೈಸೂರು| ಪ್ರತಿಮೆಗಳಿಗೆ ರಕ್ಷಣೆಯೇ ಇಲ್ಲ: ಮಾಜಿ ಶಾಸಕ ಎಲ್.ನಾಗೇಂದ್ರ ಕಿಡಿ

mysuru nagara

ಮೈಸೂರು: ಮಾನಸಿಕ ಅಸ್ವಸ್ಥನೋರ್ವ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಏರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಇಂದು ಕೆ.ಆರ್.ವೃತ್ತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಮುಖಂಡ ರಘು ಕೌಟಿಲ್ಯ, ಮಾಜಿ ಮೇಯರ್ ಸಂದೇಶ್ ಸ್ವಾಮಿ ಅವರಿಂದು ಕೆ.ಆರ್.ವೃತ್ತಕ್ಕೆ ಭೇಟಿ ನೀಡಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆಯನ್ನು ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಮಾಜಿ ಶಾಸಕ ಎಲ್.ನಾಗೇಂದ್ರ ಅವರು, ಈ ಘಟನೆಯಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಈ ಮೂಲಕ ಜಿಲ್ಲಾಡಳಿತ ಮೈಸೂರು ರಾಜರಿಗೆ ಅಪಮಾನ ಮಾಡಿದಂತಾಗಿದೆ. ಕೂಡಲೇ ಈ ಘಟನೆ ಕುರಿತು ಪಾಲಿಕೆ ಹಾಗೂ ಜಿಲ್ಲಾಡಳಿತ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಇನ್ನು ನಗರದಲ್ಲಿರುವ ಪ್ರತಿಮೆಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಇನ್ನು ಮುಂದಾದರೂ ಪ್ರತಿಮೆಗಳ ಬಳಿ ಸಿಸಿ ಕ್ಯಾಮರಾ ಅಳವಡಿಸಿ, ವಾಚ್‌ಮ್ಯಾನ್‌ಗಳನ್ನು ನಿಯೋಜಿಸಬೇಕು. ನಗರದ ಹೃದಯ ಭಾಗದಲ್ಲಿರುವ ಪ್ರತಿಮೆಗೆ ಪೊಲೀಸರಿಂದ ರಕ್ಷಣೆ ನೀಡಲಾಗಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

Tags:
error: Content is protected !!