Mysore
20
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಬಳಿ ಹುಚ್ಚಾಟ ಪ್ರಕರಣ: ಘಟನೆ ಖಂಡಿಸಿ ಯದುವೀರ್‌ ಒಡೆಯರ್‌ ಪೋಸ್ಟ್‌

_Yaduveer Wadiyar post

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಬಳಿ ವ್ಯಕ್ತಿಯೋರ್ವ ಹುಚ್ಚಾಟ ಮೆರೆದಿದ್ದ ಪ್ರಕರಣವನ್ನು ಖಂಡಿಸಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಂಸದ ಯದುವೀರ್‌ ಒಡೆಯರ್‌ ಅವರು, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ನಡೆದ ಈ ಅಗೌರವ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಅವರು ರಾಜ್ಯ ಮತ್ತು ರಾಷ್ಟ್ರಕ್ಕಾಗಿ ಕೈಗೊಂಡ ದೂರದೃಷ್ಟಿಯ ಅಭಿವೃದ್ಧಿ ಕಾರ್ಯಗಳಿಗೆ ಈ ನಾಡಿನ ಜನತೆ ಆಭಾರಿಯಾಗಿ ಸ್ಮರಿಸುತ್ತಿದ್ದಾರೆ. ಅವರ ಗೌರವ ಭಾವನೆಗಳಿಗೆ ಈಗ ಧಕ್ಕೆ ಉಂಟಾಗಿದೆ. ಐತಿಹಾಸಿಕ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ಸ್ಮಾರಕಗಳು, ಪ್ರತಿಮೆಗಳಿಗೆ ಹೆಚ್ಚಿನ ಜಾಗರೂಕತೆ ಮತ್ತು ರಕ್ಷಣೆಯನ್ನು ವಿಸ್ತರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದರು.

ಇನ್ನು ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ನಮ್ಮ ಪರಂಪರೆ ಮತ್ತು ಹೆಮ್ಮೆಯನ್ನು ಸಂಕೇತಿಸುತ್ತಾರೆ. ಅವರು ನಮ್ಮ ರಾಷ್ಟ್ರದ ಅತ್ಯಮೂಲ್ಯ ಸಂಪತ್ತಾಗಿರುತ್ತಾರೆ. ಹೀಗಾಗಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

Tags:
error: Content is protected !!