ಮೈಸೂರು: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಅವರು, ನಟ ಕಮಲ್ ಹಾಸನ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:- ಕಮಲ್ ʼಕನ್ನಡʼ ವಿವಾದ : ಬಂದ್‌ಗೆ ಕರೆ ನೀಡುವುದಾಗಿ ವಾಟಾಳ್ ಎಚ್ಚರಿಕೆ
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಕೂಡಲೇ ಕಮಲ್ ಹಾಸನ್ ಕನ್ನಡಿಗರ ಬಳಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡಲ್ಲ ಎಂದು ಆಗ್ರಹಿಸಿದರು.





