Mysore
22
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ರಾಜ್ಯ ಸರ್ಕಾರ ನಮ್ಮ ಕಾರ್ಯಕರ್ತರನ್ನು ಅಪಮಾನ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

by vijayendra

ಬೆಂಗಳೂರು: ಪಾಳೇಗಾರಿಕೆ ಹಂಗಿಸುವ ರೀತಿಯಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಆರ್‌ಎಸ್‌ಎಸ್‌ ಮುಖಂಡರ ವಿರುದ್ಧ ಎಫ್‌ಐಆರ್‌ ಹಾಗೂ ಹಿಂದೂ ಮುಖಂಡರನ್ನು ಗಡಿಪಾರು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಾಳೇಗಾರಿಕೆ ಹಂಗಿಸುವ ರೀತಿ ಆಡಳಿತ ನಡೆಸುತ್ತಿದೆ. ಸರ್ಕಾರದಿಂದ ನಮ್ಮ ಕಾರ್ಯಕರ್ತರನ್ನು ಅಪಮಾನ ಮಾಡಲಾಗುತ್ತಿದೆ. ಸುಹಾಸ್‌ ಶೆಟ್ಟಿ ಹತ್ಯೆ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ. ಇದೇ ರೀತಿ ಮುಂದುವರಿದರೆ ಮುಂದಿನ ಬೆಳವಣಿಗೆಗೆ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸಿದ್ದೇವೆ. ನಾವೆಲ್ಲಾ ಕೈಕಟ್ಟಿ ಕೂರಲ್ಲ. ಸರ್ಕಾರದ ಬೆದರಿಕೆಗೆ ಹೆದರಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರ ವಿರುದ್ಧ ಹಾಕಿರುವ ಕೇಸ್‌ ವಾಪಸ್‌ ತೆಗೆದುಕೊಳ್ಳಬೇಕು. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಸುಮ್ಮನಿರಲ್ಲ ಎಂದು ಕಿಡಿಕಾರಿದರು.

Tags:
error: Content is protected !!