Mysore
17
few clouds

Social Media

ಶನಿವಾರ, 24 ಜನವರಿ 2026
Light
Dark

ಕರಾಮುವಿ ಗೌರವ ಡಾಕ್ಟರೇಟ್‌ ಹಿಂದಿರುಗಿಸಿದ ಸಚಿವ ಸತೀಶ್‌ ಜಾರಕಿಹೊಳಿ

satish jarakihole

ಮೈಸೂರು: ಸಚಿವ ಸತೀಶ್‌ ಜಾರಕಿಹೊಳಿ ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡಿದ ಗೌರವ ಡಾಕ್ಟರೇಟ್‌ ಹಿಂದಿರುಗಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು, ಈ ಗೌರವ ಡಾಕ್ಟರೇಟ್‌ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿರುತ್ತೇನೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವ ಗುರುತರವಾದ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶದ ಅವಶ್ಯಕತೆ ಇದೆ.

satish jarakihole

ಈ ಹಿನ್ನೆಲೆಯಲ್ಲಿ ತಾವು ಪ್ರೀತಿ ಪೂರ್ವಕವಾಗಿ ತಮ್ಮ ವಿಶ್ವವಿದ್ಯಾನಿಲಯದ ವತಿಯಿಂದ ನನಗೆ ನೀಡಿದ ಗೌರವ ಡಾಕ್ಟರೇಟ್‌ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ಮುಂದುವರೆದಂತೆ, ನನ್ನ ಈ ನಿರ್ಧಾರವನ್ನು ಅನ್ಯಥಾ ಭಾವಿಸಬೇಡಿ. ಇದು ನಾನು ಮನಸೋಯಿಚ್ಛೆ ಕೈಗೊಂಡಿರುವ ನಿರ್ಧಾರವಾಗಿದ್ದು, ತಾವು ಈ ನಿರ್ಧಾರವನ್ನು ಸ್ವಾಗತಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಕಳೆದ ಮಾರ್ಚ್.‌27ರಂದು ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಾಗಿತ್ತು.

Tags:
error: Content is protected !!