Mysore
18
few clouds

Social Media

ಶನಿವಾರ, 24 ಜನವರಿ 2026
Light
Dark

ಬಾಲಕಾರ್ಮಿಕರ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ: ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಬಾಲಕಾರ್ಮಿಕ ಮಕ್ಕಳ ರಕ್ಷಣೆ ಮಾಡುವುದರ ಜೊತೆಗೆ ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ವಿದ್ಯಾಭ್ಯಾಸಕ್ಕೂ ಒತ್ತು ನೀಡಿದರೆ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಸಮಾಜದಿಂದ ದೂರಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ಮಂಗಳವಾರ ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿಯಲ್ಲಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲಕಾರ್ಮಿಕರನ್ನು ಶಾಲೆಗೆ ದಾಖಲು‌ ಮಾಡಿದ ನಂತರ ಅವರ ಶೈಕ್ಷಣಿಕ ಪ್ರಗತಿ ಹಾಗೂ ಹಾಜರಾತಿಯ ಬಗ್ಗೆ ಪ್ರತಿ ಪರಿಶೀಲಿಸಬೇಕು ಇಲ್ಲವಾದಲ್ಲಿ ಅವರು ಪುನ: ಶಾಲೆ ಬಿಡುವ ಸಾಧ್ಯತೆ ಇರುತ್ತದೆ ಎಂದರು.

2022-23 ನೇ ಸಾಲಿನಲ್ಲಿ-10 ಬಾಲಕಾರ್ಮಿಕರು, 2023-24 ನೇ ಸಾಲಿನಲ್ಲಿ-20 ಹಾಗೂ 2024-25 ನೇ ಸಾಲಿನಲ್ಲಿ-6 ಬಾಲ ಕಾರ್ಮಿಕರನ್ನು ಪತ್ತೆ‌ಹಚ್ಚಿ ಕಾರ್ಮಿಕ ಇಲಾಖೆಯಿಂದ ಶಾಲೆಗೆ ದಾಖಲು ಮಾಡಲಾಗಿದೆ. ಈ 36 ಮಕ್ಕಳ ಮಾಹಿತಿ ವಿದ್ಯಾರ್ಥಿವಾರು ಶಿಕ್ಷಣ ಇಲಾಖೆಯಲ್ಲಿ ಲಭ್ಯವಿರಬೇಕು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ವಿದ್ಯಾರ್ಥಿಗಳ ಬಗ್ಗೆ ವಿಶೇಷ ನಿಗಾ ವಹಿಸಬೇಕು ಎಂದರು.

ಕಾರ್ಮಿಕ ಇಲಾಖೆ ಅವರು ನಗರ ಪ್ರದೇಶದ ಬೇಕರಿ ಹಾಗೂ ಗ್ಯಾರೇಜ್ ಗಳಲ್ಲಿ ಹೆಚ್ಚು ದಾಳಿ ನಡೆಸುತ್ತಾರೆ. ಕಲ್ಲು ಗಣಿಗಾರಿಕೆ, ಸಣ್ಣ ಕೈಗಾರಿಕೆಗಳು, ಗ್ರಾಮೀಣ ಪ್ರದೇಶಗಳಲ್ಲೂ‌ ಹೆಚ್ಚು ದಾಳಿ ನಡೆಸಿ ಎಂದರು.

ಜೂನ್ 12 ರಂದು ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಜೂನ್ 12 ರಂದು ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಕಲಾಮಂದಿರದಲ್ಲಿ ಆಚರಿಸಿ ಹಾಗೂ ಜಿಲ್ಲೆಯ ಹೋಟೆಲ್ ಮಾಲೀಕರು, ಕ್ವಾರಿ ಮಾಲೀಕರು, ಕಾರ್ಖಾನೆಗಳ ಮುಖ್ಯಸ್ಥರಿಗೆ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಯ ಬಗ್ಗೆ ಕಾರ್ಯಗಾರಗಳನ್ನು ಕೈಗೊಳ್ಳಿ ಎಂದರು.

ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್ ಮಾತನಾಡಿ, ಕಾರ್ಮಿಕ ಇಲಾಖೆ ಅವರು ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ಹೆಚ್ಚು ದಾಳಿ ನಡೆಸಿ. ದಾಳಿ ಮಾಡಿದ ಬಗ್ಗೆ ಹೆಚ್ಚು ಪ್ರಚಾರ ಕೈಗೊಳ್ಳಿ ಎಂದರು.

ಸಭೆಯಲ್ಲಿ ಅಪರ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ-2 ಟಿ. ಲಕ್ಷ್ಮಿ, ಕಾರ್ಮಿಕ ಅಧಿಕಾರಿ ಡಾ. ಸವಿತಾ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚೆಲುವಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವರಾಮೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:
error: Content is protected !!