ಮೈಸೂರು: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್ ಪ್ರಶಸ್ತಿಯನ್ನು ಎತ್ತಿಹಿಡಿದಿದೆ.
ಈ ಹಿನ್ನೆಲೆಯಲ್ಲಿ ಮೈಸೂರು ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಇಂದು ಉಚಿತ ಹೋಳಿಗೆ ಊಟ ನೀಡಲಾಗುವುದು. ಆರ್‌ಸಿಬಿ ಗೆಲುವಿನ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸಂಭ್ರಮಾಚರಣೆ ಜೋರಾಗಿದ್ದು, ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ಊಟ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.





