Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ: ಸಚಿವ ಜಿ.ಪರಮೇಶ್ವರ್‌

g parameshwar

ಬೆಂಗಳೂರು: ಭದ್ರತೆ ದೃಷ್ಟಿಯಿಂದ ಆರ್‌ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಆರ್‌ಸಿಬಿ ತಂಡವನ್ನು ಸಿಎಂ ಸಿದ್ದರಾಮಯ್ಯ ಅವರು, ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ.

ಆದರೆ ವಿಜಯೋತ್ಸವದ ಮೆರವಣಿಗೆ ಕೊನೆ ಕ್ಷಣದಲ್ಲಿ ರದ್ದಾಗಿದ್ದು, ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರ ಮೆರವಣಿಗೆ ಇಲ್ಲ ಎಂದರು.

ಇದನ್ನೂ ಓದಿ:- ಐಪಿಎಲ್‌ ಟ್ರೋಫಿ ಗೆದ್ದ ಆರ್‌ಸಿಬಿ: ಮೈಸೂರಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ಊಟ ವಿತರಣೆ

ಇನ್ನು ಸೀಮಿತ ಪಾರ್ಕಿಂಗ್‌ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!