Mysore
18
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಕಾಲ್ತುಳಿತ : RCB ಫ್ರಾಂಚೈಸಿ, ಮ್ಯಾನೇಜ್‌ ಮೆಂಟ್‌ ವಿರುದ್ಧ ಎಫ್‌ಐಆರ್‌ ದಾಖಲು

rcb

ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ಮತ್ತು ಮ್ಯಾನೇಜ್‌ಮೆಂಟ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬೆಂಗಳೂರಿನ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಆರ್‌ಸಿಬಿ ಫ್ರಾಂಚೈಸಿ ಎ1, ಇವೆಂಟ್‌ ಮ್ಯಾನೇಜ್‌ಮೆಂಟ್‌ ಎ3, ಕೆಎಸ್‌ಸಿಎ ಎ3 ಆಗಿದೆ.

ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ 105 (ಮಾನವ ನರಹತ್ಯೆ), BNS 106, 118(1), 118(2), 190, 132, 125A,125(B) ಅಡಿಯಲ್ಲಿ ಕೇಸ್ ದಾಖಲು ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮೊದಲು ಈ ಪ್ರಕರಣ ಸಂಬಂಧ ಯುಡಿಆರ್‌ (UDR) ದಾಖಲಿಸಲಾಗಿತ್ತು, ಇದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಯುಡಿಆರ್ ಅಂದರೆ, ಅನ್ ನ್ಯಾಚುರಲ್ ಡೆತ್ ರಿಪೋರ್ಟ್ (ಅಸಹಜ ಸಾವಿನ ವರದಿ) ಈ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ ಇಲಾಖೆ ಎಫ್‌ಐಆರ್‌ ದಾಖಲಿಸಿದೆ.

ಬೆಂಗಳೂರು ಕಾಲ್ತುಳಿತ ದುರಂತ ಸದ್ಯ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಬ್ಬನ್ ಪಾರ್ಕ್​ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಅಲ್ಲದೇ ರಾಜ್ಯ ಸರ್ಕಾರ ಈ ಘಟನೆಯನ್ನು ಮ್ಯಾಜಿಸ್ಟ್ರೇಟ್ ತನಿಖೆಗೂ ಆದೇಶಿಸಿದೆ. ಈ ಮಧ್ಯೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೂಡ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಎಸ್​​ಸಿಎ ವಿರುದ್ಧ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡಿದ್ದು, ಘಟನೆ ಸಂಬಂಧ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

Tags:
error: Content is protected !!