Mysore
26
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

ರಾಜ್ಯ ಸರ್ಕಾರ ಪೊಲೀಸರನ್ನು ಹರಕೆಯ ಕುರಿ ಮಾಡಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಕಾನೂನನ್ನು ಕಗ್ಗತ್ತಲಿನಲ್ಲಿಟ್ಟಿದ್ದಾರೆ. ಗ್ರೇಟ್‌ ಸಮಾಜವಾದಿ, ಮಜಾವಾದಿ ಸಿದ್ದರಾಮಯ್ಯನವರಿಂದ ಹೀಗಾಗಿದೆ. ಆರ್‌ಸಿಬಿ ತಂಡ ಐಪಿಎಲ್‌ ಗೆದ್ದಿದ್ದರೆ, ಕೆಪಿಸಿಸಿ ತಂಡ ಫೋಟೋಗೆ ಫೋಸ್‌ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬ್ಯಾಟ್ಸ್‌ಮನ್‌ ಹಾಗೂ ಡಿ.ಕೆ.ಶಿವಕುಮಾರ್‌ ಅವರೇ ಬೌಲರ್‌ ಆಗಿದ್ದಾರೆ. ಸಿದ್ದರಾಮಯ್ಯನವರನ್ನು ಬೋಲ್ಡ್‌ ಮಾಡಬೇಕೆಂದು ಡಿ.ಕೆ.ಶಿವಕುಮಾರ್‌ ಪ್ರಯತ್ನ ಮಾಡುತ್ತಿದ್ದರೆ, ಐದು ವರ್ಷ ಸೆಂಚುರಿ ಹೊಡೆಯಬೇಕೆಂದು ಸಿಎಂ ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ರಾಜ್ಯದ ಜನರು ಹಿಟ್‌ ವಿಕೆಟ್‌ ಆಗಿದ್ದಾರೆ. 11 ಪ್ರತಿಭಾವಂತ ಯುವ ಜನರು ಬಲಿಯಾಗಿದ್ದಾರೆ ಎಂದು ದೂರಿದರು.

ವೇದಿಕೆಯಲ್ಲಿ ಕಾಂಗ್ರೆಸ್‌ ನಾಯಕರ ಕೈಯಲ್ಲೇ ಟ್ರೋಫಿ ಇತ್ತು. ವರ್ಷಾನುಗಟ್ಟಲೆ ಶ್ರಮವಹಿಸಿ ಆಟವಾಡಿದ ಆಟಗಾರರನ್ನು ಮೂಲೆಗೆ ತಳ್ಳಿದ್ದರು. ಈ ಸಂಭ್ರಮಾಚರಣೆ ಆತುರದ ತೀರ್ಮಾನವೆಂದು ಕಾಂಗ್ರೆಸ್‌ನ ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ನ ಸಮರ್ಪಣಾ ಸಮಾವೇಶ ಮಾಡುವ ಮುನ್ನ, ಬೆಂಗಳೂರಿನಲ್ಲಿ ಪ್ರವಾಹ ಬಂದರೂ ಬಹಳಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಯುವಜನರಿಗೆ ಸಂಬಂಧಿಸಿದಂತೆ ಕ್ರೀಡಾ ಕಾರ್ಯಕ್ರಮ ಮಾಡುವಾಗ ಸಿದ್ಧತೆಯನ್ನೇ ಮಾಡಿಕೊಂಡಿಲ್ಲ. ಕಾಂಗ್ರೆಸ್‌ನ ಸಮಾವೇಶಕ್ಕೆ ಮಾಡಿದ್ದ ಸಿದ್ಧತೆಯ ಒಂದು ಪರ್ಸೆಂಟ್‌ನಷ್ಟು ಸಮಯವನ್ನು ಇಲ್ಲಿ ನೀಡಿದ್ದರೆ ಯುವಜನರ ಬದುಕು ಉಳಿಯುತ್ತಿತ್ತು ಎಂದರು.

Tags:
error: Content is protected !!