ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳು ಜೈಲುಪಾಲಾಗಿದ್ದಾರೆ.
ಬಂಧಿತ ಆರ್‌ಸಿಬಿ ಮ್ಯಾನೇಜ್ಮೆಂಟ್‌ನ ಸಿಬ್ಬಂದಿ ನಿಖಿಲ್ ಸೋಸಲೆ, ಸುಮಂತ್, ಡಿಎನ್‌ಎ ಕಂಪನಿ ಮ್ಯಾನೇಜರ್ ಕಿರಣ್, ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಅವರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಈ ವೇಳೆ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಜೂನ್.19ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ನಾಲ್ವರು ಆರೋಪಿಗಳು ಜೈಲುಪಾಲಾಗಿದ್ದಾರೆ.





