Mysore
20
overcast clouds

Social Media

ಶನಿವಾರ, 10 ಜನವರಿ 2026
Light
Dark

ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ನಟ ಕಮಲ್‌ ಹಾಸನ್‌

ಚೆನ್ನೈ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಗದ್ದಲವೆಬ್ಬಿಸಿದ ನಟ ಕಮಲ್‌ ಹಾಸನ್‌ ಈಗ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ.

ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್.‌19ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮುಂದಿನ ಸೋಮವಾರ ಕಡೆಯ ದಿನವಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಕಮಲ್‌ ಹಾಸನ್‌ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದು, ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ಕಮಲ್‌ ಹಾಸನ್‌ ಅವರಿಂದು ತಮ್ಮ ನಾಮಪತ್ರಗಳನ್ನು ವಿಧಾನಸಭೆ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ.

ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ತನ್ನ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ಕಮಲ್‌ ಹಾಸನ್‌ ಅವರ ಮಕ್ಕಳ್‌ ನೀಧಿ ಮಯ್ಯಂ ಪಕ್ಷಕ್ಕೆ ನೀಡಲು ನಿರ್ಧರಿಸಿದೆ.

Tags:
error: Content is protected !!