Mysore
22
overcast clouds

Social Media

ಶನಿವಾರ, 13 ಜೂನ್ 2026
Light
Dark

ಆ ಆಡಿಯೋ ಮೂಲಕ ನನ್ನನ್ನು ನಾಶ ಮಾಡಿದ್ದಾರೆ: ನಟ ಮಡೆನೂರು ಮನು

madenoor manu

ಬೆಂಗಳೂರು: ಅತ್ಯಾಚಾರ ಹಾಗೂ ಬ್ಲ್ಯಾಕ್‌ಮೇಲ್‌ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಮಿಡಿ ನಟ ಮಡೆನೂರು ಮನು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್‌ ಆದ ಬಳಿಕ ಮೊದಲ ಬಾರಿಗೆ ಮಾತನಾಡಿದ ಅವರು, ಆಡಿಯೋ ವೈರಲ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟರ ಬಗ್ಗೆ ಅಗೌರವವಾಗಿ ಮಾತನಾಡಿದ್ದ ಆಡಿಯೋ ವೈರಲ್‌ ಆಗಿತ್ತು. ಈ ಬಗ್ಗೆ ಮಾತನಾಡಿದ ಮಡೆನೂರು ಮನು ಆಡಿಯೋ ಮೂಲಕ ನನ್ನನ್ನು ನಾಶ ಮಾಡಿದ್ದಾರೆ. ಆದರೆ ಆ ಆಡಿಯೋ ನನ್ನದಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:- ದಯಾನಂದ್‌ ಅಮಾನತು ವಿಚಾರ: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆಕ್ರೋಶ

ಹಲವು ವರ್ಷಗಳ ಕಾಲ ಜೂನಿಯರ್‌ ಆರ್ಟಿಸ್ಟ್‌ ಆಗಿ ಕೆಲಸ ಮಾಡಿದ್ದೇನೆ. ನನ್ನ ಕನಸು ಈಡೇರುವಾಗ ಈ ರೀತಿ ಆಗಿದೆ. ನನ್ನ ಪರಿಸ್ಥಿತಿ ಯಾವ ಶತ್ರುಗೂ ಬೇಡ. ನನಗೆ ಈ ರೀತಿ ಮಾಡಿದ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Tags:
error: Content is protected !!