Mysore
17
few clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ನಾಳೆ ನಡೆಯಬೇಕಿದ್ದ ಸೀಮಂತ ಕಾರ್ಯಕ್ರಮ : ಇಂದು ಗರ್ಭಿಣಿ ಅನುಮಾನಾಸ್ಪದ ಸಾವು

Pregnant Womans Suspicious Death

ಮದ್ದೂರು: ತುಂಬು ಗರ್ಭಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಶನಿವಾರ ಬೆಳಗಿನ ಜಾವ ಜರುಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ನಿವಾಸಿಗಳಾದ ಚಂದನ್ ಗೌಡ (24) ಹಾಗೂ ಆಶಾ (19) ಇಬ್ಬರು ಪ್ರೇಮಿಗಳು ಕಳೆದ ಒಂದುವರೆ ವರ್ಷದ ಹಿಂದೆ ಕುಟುಂಬದವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದರು.

ಬಳಿಕ ಚಂದನ್ ಗೌಡ ಎಳೆ ನೀರು ವ್ಯಾಪಾರ ಮಾಡಿಕೊಂಡು ಮದ್ದೂರು ಪಟ್ಟಣದ ಚನ್ನೆಗೌಡ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಾಗಿದ್ದರು.

ನಾಳೆ ಭಾನುವಾರ ಪತ್ನಿ ಆಶಾಗೆ ಸೀಮಂತ ಕಾರ್ಯಕ್ರಮವನ್ನು ಮಾಡಲು ತಯಾರಿ ಕೂಡ ನಡೆಸಲಾಗಿತ್ತು. ಆದರೆ, ವೇಲ್ ನಿಂದ ತುಂಬು ಗರ್ಭಿಣಿ ಪತ್ನಿಯ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ.

ಬಳಿಕ ಪತಿ ಚಂದನ್ ಗೌಡ ತನ್ನ ಪತ್ನಿ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೋಷಕರು ಪತಿ ಚಂದನ್ ಗೌಡ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಪೊಲೀಸ್‌ ಪತಿಯನ್ನು ವಷಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಈ ಸಂಬಂಧ ಪೋಷಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮದ್ದೂರು ಪೋಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಶವವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Tags:
error: Content is protected !!