Mysore
17
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಮಹದೇಶ್ವರ ಬೆಟ್ಟ | ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯ ಪೊಲೀಸರ ವಶಕ್ಕೆ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಶೇಖರಣೆ ಮಾಡಿದ್ದ 90ಎಂ.ಎಲ್.ನ 14 ಕೇಸ್ ಮದ್ಯ ವನ್ನು ಮಹದೇಶ್ವರ ಬೆಟ್ಟ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮದ ಊರಬಸಪ್ಪವೊಡ್ಡಿನ ಗ್ರಾಮದ ನಿವಾಸಿಗಳಾದ ರಾಚಪ್ಪ ಆತನ ಸಹೋದರಿಯರಾದ ಲಕ್ಷ್ಮಿ ಮತ್ತು ಭದ್ರಮ್ಮ ಎಂಬುವರು ಆರೋಪಿಗಳಾಗಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ.

ಘಟನೆ ವಿವರ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲು ರಾಚಪ್ಪ ಎಂಬುವರ ಮನೆಯಲ್ಲಿ ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಜಗದೀಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ . ಆದರೆ ಮಾರಾಟಕ್ಕೆ ಶೇಖರಣೆ ಮಾಡಿದ್ದ 90ಮೀ 14 ಕೇಸ್ (೧೨೦ಲೀ) ಮದ್ಯವನ್ನು ವಶಕ್ಕೆ ಪಡೆದು ಮೂವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಪತ್ತೆಗೆ ಈಗಾಗಲೇ ಬಲೆ ಬೀಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳೆದ ತಿಂಗಳು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಶ್ರೀ ಕ್ಷೇತ್ರವನ್ನು ಮದ್ಯಪಾನ ಮುಕ್ತ ಕ್ಷೇತ್ರವನ್ನಾಗಿ ಘೋಷಣೆ ಮಾಡಿದ್ದಾರೆ. ಆದರೂ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ಬಗ್ಗೆ ಪ್ರಕರಣಗಳು ದಾಖಲಾಗಿತ್ತು. ಈ ನಿಟ್ಟಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ಕೊಂಚಮಟ್ಟಿಗೆ ಇಳಿಕೆಯಾಗಿತ್ತು. ಇದೀಗ 14 ಕೇಸ್ ಮಧ್ಯದ ಪೌಚ್ ಗಳನ್ನು ಸಾಗಣೆ ಮಾಡುತ್ತಿರುವವರು ಯಾರು? ಎಂಬ ಪ್ರಶ್ನೆ ಕಾಡುತ್ತಿದೆ. ತಾಳು ಬೆಟ್ಟದಲ್ಲಿ ಪ್ಲಾಸ್ಟಿಕ್ ಚೆಕ್ಪೋಸ್ಟ್ ಇದ್ದರು ಇಷ್ಟು ಪ್ರಮಾಣದಲ್ಲಿ ಅಕ್ರಮವಾಗಿ ಮಧ್ಯ ಯಾವ ರೀತಿ ಸಾಗಾಣೆ ಯಾಗುತ್ತಿದೆ ಎಂಬುವುದು ಸಹ ಯಕ್ಷಪ್ರಶ್ನೆಯಾಗಿದೆ. ಇನ್ನು ಮುಂದಾದರು ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಶ್ರೀ ಕ್ಷೇತ್ರದಲ್ಲಿ ಶಾಶ್ವತವಾಗಿ ಮದ್ಯ ಮಾರಾಟವನ್ನು ನಿಲ್ಲಿಸುವರು ಕಾದು ನೋಡಬೇಕಿದೆ.

Tags:
error: Content is protected !!