ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ. ಎಸ್‌ಪಿ ಶುಭನ್ವಿತಾ ನೇತೃತ್ವದ ತಂಡ ತನಿಖೆ ನಡೆಸುತ್ತಿದ್ದು, ದುರ್ಘಟನೆ ಸಂಭವಿಸಿದ ಗೇಟ್‌ಗಳನ್ನು ಪರಿಶೀಲಿಸಿ, ಮಾಹಿತಿ ಸಂಗ್ರಹಿಸಿದ್ದಲ್ಲದೆ ಕೆಎಸ್‌ಸಿಎ ಕಚೇರಿಗೂ ಭೇಟಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಮತ್ತು ಇವೆಂಟ್ ಮ್ಯಾನೇಜ್‌ಮೆಂಟ್ ಸಿಬ್ಬಂದಿ ಸುನಿಲ್ ಮ್ಯಾಥ್ಯು, ಕಿರಣ್, ಸುಮಂತ್ ಅವರನ್ನು ಬಂಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ.
ಇದನ್ನೂ ಓದಿ:- ನೀವು ಯಾಕೆ ಹೋಗಿದ್ರಿ..? ಡಿಸಿಎಂ ಡಿಕೆಗೆ ಸಿಎಂ ಸಿದ್ದರಾಮಯ್ಯ ತರಾಟೆ
ಕಾಲ್ತುಳಿತ ಪ್ರಕರಣದಲ್ಲಿ ಕೆಎಸ್‌ಸಿಎ ವಿರುದ್ಧ ಹೈಕೋರ್ಟ್ ಯಾವುದೇ ಒತ್ತಾಯದ ಕ್ರಮಕ್ಕೆ ಅವಕಾಶ ನೀಡಬಾರದು ಎಂದು ಆದೇಶ ನೀಡಿದ್ದು, ಮುಂದಿನ ಆದೇಶದ ಆಧಾರದ ಮೇಲೆ ತನಿಖೆ ಮುಂದುವರಿಸಲಾಗುವುದು ಎಂದು ಸಿಐಡಿ ಮೂಲಗಳು ತಿಳಿಸಿವೆ.





