Mysore
21
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಕಾಲ್ತುಳಿತ ಪ್ರಕರಣ : ಐಪಿಎಲ್‌ ನಿಷೇಧಕ್ಕೆ ವಾಟಾಳ್‌ ಆಗ್ರಹ

ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರು ಬಲಿಯಾಗಿದ್ದಾರೆ. ಹೀಗಾಗಿ ಐಪಿಎಲ್‌ ಪಂದ್ಯವನ್ನೇ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ.

ಭಾನುವಾರ ನಗರದ ಹಾರ್ಡಿಂಜ್‌ ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿ ಐಪಿಎಲ್‌ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. ಪ್ರತಿಭಟನೆಗೆ ಕನ್ನಡ ಪರ ಸಂಘಟನೆಗಳು ಸಾಥ್‌ ನೀಡಿದವು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ತಪ್ಪಿತಸ್ಥರ ಮೇಲೆ ಕೂಡಲೇ ಕಠಿಣ ಕ್ರಮಕ್ಕೆ ತೆಗೆದುಕೊಳ್ಳಬೇಕು. ಸಿದ್ದರಾಮಯ್ಯ ರಾಜಿನಾಮೆ ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು. ಆದರೆ, ಘಟನೆಯ ಸಂಪೂರ್ಣ ಹೊಣೆ ರಾಜ್ಯ ಸರ್ಕಾರವೇ ಹೊರಬೇಕು ಎಂದು ಒತ್ತಾಯಿಸಿದರು.

5 ಕೋಟಿ ಪರಿಹಾರ ನೀಡಿ
ಮೃತ ಕುಟುಂಬಗಳಿಗೆ ಕ್ರಿಕೆಟ್‌ ಮಂಡಳಿಯಿಂದ 5 ಕೋಟಿ ಪರಿಹಾರ ನೀಡಬೇಕು. ಜೊತೆಗೆ ಸರ್ಕಾರ ಕೂಡಲೇ ಆರ್‌ಸಿಬಿ ತಂಡ ಹಾಗೂ ಐಪಿಎಲ್ ಗೇಮ್ ಅನ್ನು ರದ್ದು ಮಾಡಬೇಕು ಆಗ್ರಹಿಸಿದರು.

Tags:
error: Content is protected !!