Mysore
21
overcast clouds

Social Media

ಗುರುವಾರ, 01 ಜನವರಿ 2026
Light
Dark

ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ: ಎಚ್‌ಡಿಕೆ ಪ್ರಶ್ನೆ

hdk

ಬೆಂಗಳೂರು: ವಿಧಾನಸೌಧದ ಬಳಿ ಕಾಲ್ತುಳಿತ ಆಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಖಡಕ್‌ ಟಾಂಗ್‌ ಕೊಟ್ಟಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸನ್ಮಾನ್ಯ ಸಿದ್ದರಾಮಯ್ಯನವರೇ.. ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಕಿಡಿಕಾರಿದ್ದಾರೆ.

Tags:
error: Content is protected !!