Mysore
27
overcast clouds

Social Media

ಶುಕ್ರವಾರ, 31 ಜುಲೈ 2026
Light
Dark

ಕೇಂದ್ರದ ಯೋಜನೆಗಳಿಗೂ ರಾಜ್ಯ ಸರ್ಕಾರ ಕತ್ತರಿ ಹಾಕುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

by vijayendra

ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಪಾಪ ಅನ್ನಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅರ್ಧ ಸತ್ಯ ಹೇಳಿದ್ದಾರೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಗಳಿಗೂ ರಾಜ್ಯ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಕಾಲ್ತುಳಿತ ದುರಂತವನ್ನು ಡೈವರ್ಟ್‌ ಮಾಡಲು ಜಾತಿಗಣತಿ ಮರು ಸರ್ವೆ ಎಂದು ಹೇಳುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಜಾತಿಗಣತಿ ಆರಂಭ ಮಾಡಿದೆ ಎಂದರು.

ಇದನ್ನೂ ಓದಿ:- ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ವರುಣನ ಆರ್ಭಟ: 6 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಪಾಪ ಅನ್ನಿಸುತ್ತಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಆಗುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿಗೂ ಹಣವಿಲ್ಲ ಎಂದು ವ್ಯಂಗ್ಯವಾಡಿದರು.

Tags:
error: Content is protected !!