ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರೆದಿರುವ ಹಿನ್ನೆಲೆ ಸೋಮವಾರ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 41.95 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 70.95 ಮಿ.ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ 54.0 ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ 28.34 ಮಿ.ಮೀ., ಕುಶಾಲನಗರ ತಾಲ್ಲೂಕಿನಲ್ಲಿ 17.60 ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ 38.85 ಮಿ.ಮೀ. ಮಳೆಯಾಗಿದೆ.





