ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿದ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರ ಫೋಟೋ ತೆವಲಿಗೆ ಅಮಾಯಕರ ಸಾವು ಎಂದು ಪ್ಲೇಕಾರ್ಡ್ ಹಿಡಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಟಿ.ಎಸ್.ಶ್ರೀವತ್ಸ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಹಾಗೂ ಜಿಲ್ಲಾ ಬಿಜೆಪಿ ನಗರ ಘಟಕದ ಎಲ್.ನಾಗೇಂದ್ರ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.



