Mysore
24
mist

Social Media

ಗುರುವಾರ, 01 ಜನವರಿ 2026
Light
Dark

ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳ ಭೇಟಿ

ಸಿದ್ದಾಪುರ : ಅಮ್ಮತ್ತಿ ಹೋಬಳಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು, ಗುಹ್ಯ, ಕಕ್ಕಟಕಾಡು, ಕೂಡುಗದ್ದೆ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಂದಾಯ ಪರಿವೀಕ್ಷಕರು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯರಿಗೆ ನದಿ ತೀರದ ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಸಮೀಪದಲ್ಲಿರುವ ನಿವಾಸಿಗಳು ಕಾಳಜಿ ಕೇಂದ್ರಕ್ಕೆ ತೆರಳಬೇಕೆಂದು ಸೂಚಿಸಿದರು.

ಈಗಾಗಲೆ ಕರಡಿಗೋಡು -ಚಿಕ್ಕನಹಳ್ಳಿ -ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆ ಮೂಲಕ ಸಂಪರ್ಕ ಕಲ್ಪಿಸಲಾಗಿದೆ.

Tags:
error: Content is protected !!