Mysore
18
scattered clouds

Social Media

ಶನಿವಾರ, 24 ಜನವರಿ 2026
Light
Dark

ಒಣಗಾಂಜಾ ಮಾರಾಟ : ಇಬ್ಬರ ಬಂಧನ

ಹನೂರು : ಒಣಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ. ಹನೂರು ತಾಲ್ಲೂಕಿನ ವಡೆಕೆಹಳ್ಳ ಬಸ್ ನಿಲ್ದಾಣದ ಸಮೀಪ ತಮಿಳುನಾಡಿನ ಧರ್ಮಪುರಿ ನಿವಾಸಿಗಳಾದ ಮಹೇಶ್, ಕಾರ್ತಿಕ್ (ಪ್ರಸ್ತುತ ಬೆಂಗಳೂರಿನ ಜೆ.ಪಿ. ನಗರದಲ್ಲಿ ವಾಸ) ಬಂಧಿತರು.

ಈ ಇಬ್ಬರು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ, ಕೊಳ್ಳೇಗಾಲ ಉಪವಿಭಾಗದ ಡಿವೈಎಸ್ಪಿ ಧರ್ಮೇಂದ್ರ, ಇನ್‌ಸ್ಪೆಕ್ಟರ್ ಚಿಕ್ಕರಾಜ ಶೆಟ್ಟಿ ಮಾರ್ಗದರ್ಶನದಲ್ಲಿ ರಾಮಾಪುರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿದಾಗ 297 ಗ್ರಾಂ ಒಣ ಗಾಂಜಾ ಇರುವುದು ಪತ್ತೆಯಾಗಿದ್ದು, ಅದನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ, ಆರೋಪಿಗಳನ್ನು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ದಾಳಿಯಲ್ಲಿ ಪೇದೆಗಳಾದ ಲಿಯಾಖತ್ ಆಲಿಖಾನ್, ರಾಜು, ರಾಮಪ್ಪ, ಅಕ್ಮಲ್, ಇನ್ನಿತರರು ಪಾಲ್ಗೊಂಡಿದ್ದರು.

Tags:
error: Content is protected !!