Mysore
21
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮಿನಿ ನಾಗರಾಜ್ ಅವರು ರಾಜೀನಾಮೆ ನೀಡಿದ್ದಾರೆ.

ಇವರ ರಾಜೀನಾಮೆ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಪದ್ಮಿನಿ ಅವರು ತಾಯಿಯ ಅನಾರೋಗ್ಯದ ಕಾರಣ ರಾಜೀನಾಮೆ ನೀಡುತ್ತಿರುವದಾಗಿ ಸ್ಪಷ್ಟನೆ ನೀಡಿದ್ದಾರೆ. ಆದರೆ ಸಾಹಿತ್ಯ ವಲಯದಲ್ಲಿ ಬೇರೆಯದ್ದೇ ಕಾರಣ ಇದೆ ಎಂಬ ಮಾತುಗಳು ಕೇಳೀ ಬರುತ್ತಿವೆ. ಹಿನ್ನೆಲೆಯಲ್ಲಿ ಅವರನ್ನು ನೋಡಿಕೊಳ್ಳಬೇಕಾಗಿದೆ ಹಾಗಾಗಿ ಕಸಾಪದ ಮಹತ್ವದ ಜವಾಬ್ದಾರಿ ಹೊರಲು ಸಾಧ್ಯವಾಗುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ, ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಅವರ ನಡೆಯನ್ನು ವಿರೋಧಿಸಿ ಪದ್ಮಿನಿ ಅವರು ರಾಜೀನಾಮೆ ನೀಡಿದ್ದಾರೆ ಎಂದೂ ಹೇಳಲಾಗುತ್ತಿದೆ.

  1. ಕಳೆದ ಹಲವು ದಿನಗಳಿಂದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯುತ್ತಿರುವ ಹಲವು ವಿದ್ಯಾಮಾನಗಳು ಸಾಕಷ್ಟು ಅಸಮಾಧಾನಗಳಿಗೆ ಕಾರಣವಾಗುತ್ತಿವೆ. ಬಹಿರಂಗವಾಗಿ ಕೆಲ ಜಿಲ್ಲಾ ಸಂಘಟನೆಗಳು ಹಾಗೂ ಸಾಹಿತಿಗಳು ಮತ್ತು ಕಸಾಪದ ಹಿತ ಚಿಂತಕರು, ಅಧ್ಯಕ್ಷರು ಸರ್ವಾಧಿಕಾರಿ ದೋರಣೆ ತಳೆದಿದ್ದಾರೆ ಕೂಡಲೇ ರಾಜೀನಾಮೆ ನೀಡಬೇಕೆಂದು ಹೇಳುತ್ತಿದ್ದಾರೆ.

ಇದರ ನಡುವೆ ಕಸಾಪದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಪದ್ಮನಿ ನಾಗರಾಜ್ ಅವರು ರಾಜೀನಾಮೆ ನೀಡುತ್ತಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

Tags:
error: Content is protected !!