Mysore
27
overcast clouds

Social Media

ಮಂಗಳವಾರ, 14 ಜುಲೈ 2026
Light
Dark

ರಾಜ್ಯದ 6 ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

rainy season

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಆರಂಭವಾಗಿದ್ದು, ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ತುಮಕೂರು, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಯಾದಗಿರಿ, ಬೀದರ್‌, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

Tags:
error: Content is protected !!